ಬೆಂಗಳೂರು: ಲಂಡನ್ನ ಬಸವ ಅಂತರಾಷ್ಟ್ರೀಯ ಪ್ರತಿಷ್ಠಾನ ನೀಡುವ ‘ಡಾ.ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ’ಗೆ ಸಾಹಿತಿ ಕೆ. ಮರುಳಸಿದ್ದಪ್ಪ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ಇದೇ 23ರಂದು ಇಲ್ಲಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಹಾಗೂ ವಿಮರ್ಶಕಿ ಎಂ.ಎಸ್. ಆಶಾದೇವಿ ಉಪಸ್ಥಿತರಿರಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹಾದೇವಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.