ADVERTISEMENT

ಚುನಾವಣೆ ಬಳಿಕ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2024, 15:21 IST
Last Updated 7 ಫೆಬ್ರುವರಿ 2024, 15:21 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಂಗಳೂರು: ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗವಾಗಲಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡಿದ ಸರ್ಕಾರ ನೋಡಿರಲಿಲ್ಲ.‌ ಸಿದ್ದರಾಮಯ್ಯ  ತತ್ವ–ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌ ಎಂದು ಪ್ರಶ್ನಿಸಿದರು.

ಮೋದಿಯವರು ರಾಜ್ಯಕ್ಕೆ ಸ್ಮಾರ್ಟ್ ಸಿಟಿ ರಾಷ್ಟ್ರೀಯ ಹೆದ್ದಾರಿ ರೈಲ್ವೆ ಕೈಗಾರಿಕೆಗಳನ್ನು ನೀಡಿದ್ದಾರೆ. ಮೋದಿಯವರು ಪ್ರಧಾನಿಯಾಗಿರುವಾಗ ಮುಖ್ಯಮಂತ್ರಿ ಆಗಿರುವುದು ಸಿದ್ದರಾಮಯ್ಯನವರ ಪುಣ್ಯ. ಮನಮೋಹನ್ ಸಿಂಗ್ ಸರ್ಕಾರ ಇದ್ದಿದ್ದರೆ ನಿಮಗೆ ಚಿಪ್ ಕೊಡುತ್ತಿದ್ದರು ಎಂದು ಬೊಮ್ಮಾಯಿ ಹೇಳಿದರು.

ADVERTISEMENT

ಮಜಾ ಮಾಡಲು ದೆಹಲಿಗೆ: ಅಶೋಕ ಟೀಕೆ

ಕಾಂಗ್ರೆಸ್‌ ನಾಯಕರು ದೆಹಲಿಗೆ ಮಜಾ ಮಾಡಲು ಹೋಗಿದ್ದು ವಿಧಾನಸೌಧ ಖಾಲಿಯಾಗಿ ಅಧಿಕಾರಿಗಳಿಗೆ ಕೆಲಸವಿಲ್ಲದಂತಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಸಾಲ ಮಾಡಿಯಾದರೂ ರೈತರ ಜತೆ ನಿಲ್ಲಬೇಕು ಎನ್ನುವುದು ಬಿಜೆಪಿ ಯೋಚನೆ ಸಾಲ ಮಾಡಿ ಕಾರ್ಯಕರ್ತರಿಗೆ ಬಿರಿಯಾನಿ ತಿನ್ನಿಸುವುದು ಎಂದು ಕಾಂಗ್ರೆಸ್‌ ಮನೋಸ್ಥಿತಿ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.