ADVERTISEMENT

ಹೃದಯ ಶಸ್ತ್ರಚಿಕಿತ್ಸೆ: ಬಸವರಾಜ ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 14:43 IST
Last Updated 21 ಅಕ್ಟೋಬರ್ 2023, 14:43 IST
<div class="paragraphs"><p>ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರು ಬಸವರಾಜ ಬೊಮ್ಮಾಯಿ ಅವರ ಆರೋಗ್ಯವನ್ನು ವಿಚಾರಿಸಿದರು. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್‌ ಇದ್ದರು.</p></div>

ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರು ಬಸವರಾಜ ಬೊಮ್ಮಾಯಿ ಅವರ ಆರೋಗ್ಯವನ್ನು ವಿಚಾರಿಸಿದರು. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್‌ ಇದ್ದರು.

   

ಬೆಂಗಳೂರು: ಹೃದಯಸಂಬಂಧಿ ಸಮಸ್ಯೆ ಕಾರಣ ಬನ್ನೇರುಘಟ್ಟದ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಪರಿಧಮನಿಯ ಬೈಪಾಸ್ ಶಸ್ತ್ರಚಿಕಿತ್ಸೆಗೆ (ಸಿಎಬಿಜಿ) ಒಳಗಾಗಿದ್ದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. 

ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರು ಅ.15ರಂದು ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ವಿವೇಕ್‌ ಜವಳಿ ಮೇಲ್ವಿಚಾರಣೆಯಲ್ಲಿ ಅವರಿಗೆ ಆಂಜಿಯೊಗ್ರಾಂ ಸೇರಿ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿತ್ತು. ಪರಿಧಮನಿಯಲ್ಲಿ ಸಮಸ್ಯೆ ಇರುವುದು ದೃಢಪಟ್ಟಿದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈಗ ಅವರು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

ADVERTISEMENT

‘ಬಸವರಾಜ ಬೊಮ್ಮಾಯಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುವ ಜತೆಗೆ ಆತ್ಮವಿಶ್ವಾಸದಿಂದ ಇದ್ದರು. ಇದು ಚೇತರಿಕೆಗೆ ಸಹಕಾರಿಯಾಯಿತು. ಒಂದೆರಡು ವಾರದಲ್ಲಿ ಈ ಮೊದಲಿನಂತೆ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು’ ಎಂದು ಡಾ.ವಿವೇಕ್ ಜವಳಿ ಹೇಳಿದ್ದಾರೆ.  

ಬಸವರಾಜ ಬೊಮ್ಮಾಯಿ, ‘ಇಲ್ಲಿನ ವೈದ್ಯರು ಜೀವಕ್ಕೆ ಎದುರಾಗಿದ್ದ ಅಪಾಯವನ್ನು ತಡೆದು, ಉತ್ತಮವಾಗಿ ಆರೈಕೆ ಮಾಡಿದ್ದಾರೆ. ಇದರಿಂದಾಗಿ ಚೇತರಿಸಿಕೊಳ್ಳುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಸಿ.ಎಂ ಭೇಟಿ: ಫೋರ್ಟಿಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.