ADVERTISEMENT

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2023, 7:21 IST
Last Updated 1 ಫೆಬ್ರುವರಿ 2023, 7:21 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆ ₹5,300 ಕೋಟಿ ಅನುದಾನ ಒದಗಿಸಿದ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಇಂದು 2023–24ನೇ ಸಾಲಿನ ಬಜೆಟ್‌ ಮಂಡನೆ ಮಂಡಿಸುತ್ತಿದ್ದಾರೆ.

ADVERTISEMENT

ಈ ವರ್ಷದ ಶೇಕಡ 7ರಷ್ಟು ಬೆಳವಣಿಗೆ ದರಕ್ಕೆ ಹೋಲಿಸಿದರೆ, ಭಾರತದ ಆರ್ಥಿಕತೆಯು 2023–24ರ ಆರ್ಥಿಕ ವರ್ಷದಲ್ಲಿ ಶೇ. 6.5ರಷ್ಟು ಬೆಳವಣಿಗೆಯಾಗಲಿದೆ. 2021–22ರಲ್ಲಿ ಈ ದರ ಶೇಕಡ 8.7ರಷ್ಟಿತ್ತು. ಭಾರತವು ಈಗಲೂ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.