ಬೆಂಗಳೂರು: ಮೇಯರ್ ಅಭ್ಯರ್ಥಿ ವಿಚಾರದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ. ಗೌತಮ್ ಕುಮಾರ್ ಅವರೇ ನಮ್ಮ ಅಧಿಕೃತ ಅಭ್ಯರ್ಥಿ ಎಂದು ಸಚಿವ ಆರ್. ಅಶೋಕ ಅವರು ಹೇಳಿದ್ದಾರೆ.
ಮೇಯರ್ ಹುದ್ದೆಗೆ ಬಿಜೆಪಿಯಿಂದ ಇಬ್ಬರು ನಾಮಪತ್ರ ಸಲ್ಲಿಸಿದ್ದರಿಂದಾಗಿ ಎದುರಾಗಿದ್ದ ಗೊಂದಳಗಳ ಹಿನ್ನೆಲೆಯಲ್ಲಿ ಮಂಗಳವಾರ ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶೋಕ, ಇಬ್ಬರು ಅಭ್ಯರ್ಥಿಗಳು
ಇದು ಚುನಾವಣೆ. ಉಮೇದುವಾರಿಕೆಯಲ್ಲಿ ಏನಾದರೂ ಸಮಸ್ಯೆಗಳಾಗಬಹುದು ಎಂಬ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಾನೇ ಸೂಚನೆ ನೀಡಿದ್ದೆ. ಅದರಂತೆ ಪದ್ಮನಾಭರೆಡ್ಡಿ ನಾಮಪತ್ರ ಸಲ್ಲಿಸಿದ್ದರು. ಆದರೆ, ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಗೌತಮ್ ಕುಮಾರ್ ಅವರೇ ಎಂದು ಅಶೋಕ ಸ್ಪಷ್ಟಪಡಿಸಿದರು.
ಕಾರ್ಪೊರೇಟರ್‌ಗಳು, ಶಾಸಕರು, ಸಂಸದರ ಹಲವು ಸುತ್ತುಗಳ ಸಭೆಯ ನಂತರವೇ ನಾವು ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದೇವೆ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಕಾಂಗ್ರೆಸ್ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಹಾಕಿದ್ದೂ ಅಲ್ಲದೇ, ನಮ್ಮಲ್ಲಿ ಚೀಟಿ ಸಂಸ್ಕೃತಿ ಇದೆ ಎಂದು ಹೇಳಿದೆ. ಆದರೆ, ನಮ್ಮಲ್ಲಿರುವ ಆಂತರಿಕ ಪ್ರಜಾಪ್ರಭುತ್ವ ಅವರ ಪಕ್ಷದಲ್ಲಿಲ್ಲ ಎಂದು ಅಶೋಕ್ ಅವರು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.