ADVERTISEMENT

ಶಿಕ್ಷಕರ ಆಯ್ಕೆ ಪೂರ್ಣ, ಜೂನ್‌ 15ರ ಒಳಗೆ ಆದೇಶ: ಸಚಿವ ಬಿ.ಸಿ.ನಾಗೇಶ್‌

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 19:31 IST
Last Updated 8 ಮಾರ್ಚ್ 2023, 19:31 IST
ಬಿ.ಸಿ.ನಾಗೇಶ್‌
ಬಿ.ಸಿ.ನಾಗೇಶ್‌   

ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳಿಗೂ ಜೂನ್‌ 15ರ ಒಳಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

ಕೋರ್ಟ್‌ ನಿರ್ದೇಶನದಂತೆ ತಂದೆಯ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದ ವಿವಾಹಿತ ಮಹಿಳೆಯರ ಮೆರಿಟ್‌ ಪರಿಗಣಿಸಿ, ಹೊಸ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. 726 ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಎಲ್ಲ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಕೋರ್ಟ್‌ ಆದೇಶಕ್ಕೂ ಮೊದಲು ಪ್ರಕಟಿಸಿದ್ದ ಪಟ್ಟಿಗೂ, ನಂತರದ ಪರಿಷ್ಕೃತ ಪಟ್ಟಿಗೂ 351 ಅಭ್ಯರ್ಥಿಗಳು ಬದಲಾಗಿದ್ದಾರೆ. ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು, 25 ಎಂಜಿನಿಯರಿಂಗ್ ಅಭ್ಯರ್ಥಿಗಳು ಸ್ಥಾನ ಪಡೆದಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆಯ್ಕೆಯಾಗಿರುವ ಅಭ್ಯರ್ಥಿಗಳ ಸಿಂಧುತ್ವ, ಪೊಲೀಸ್‌ ಪರಿಶೀಲನೆ, ತರಬೇತಿ ಕಾರ್ಯ ಪೂರ್ಣಗೊಳಿಸಿ, ಮುಂದಿನ ಶೈಕ್ಷಣಿಕ ವರ್ಷ ಆರಂಭದ ವೇಳೆಗೆ ಹೊಸ ಶಿಕ್ಷಕರನ್ನು ಶಾಲೆಗಳಿಗೆ ಕಳುಹಿಸಲಾಗುವುದು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.