ADVERTISEMENT

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 8:24 IST
Last Updated 16 ಅಕ್ಟೋಬರ್ 2024, 8:24 IST
<div class="paragraphs"><p>ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಯಂತ್ರದ ಗುಂಡಿ ಒತ್ತುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.</p></div>

ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಯಂತ್ರದ ಗುಂಡಿ ಒತ್ತುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಯಂತ್ರದ ಗುಂಡಿ ಒತ್ತುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ADVERTISEMENT

ಇದೇ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಕಾವೇರಿ ನೀರು ಶುದ್ಧೀಕರಣ ಘಟಕ್ಕೆ ಸಮರ್ಪಿಸಿದರು.

ಯೋಜನೆಗೆ ಆರ್ಥಿಕ ಸಹಕಾರ ನೀಡಿರುವ ಜಪಾನ್‌ ದೇಶದ ಜೈಕಾ ಪ್ರತಿನಿಧಿಗಳು, ಸಚಿವರು, ವಿವಿಧ ಕ್ಷೇತ್ರದ ಶಾಸಕರು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಯೋಜನೆ ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

ಇದಕ್ಕೂ ಮುನ್ನ ಜಲಮಂಡಳಿ ಆವರಣದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆ, ಹೋಮಗಳಲ್ಲಿ ಡಿಸಿಎಂ ಶಿವಕುಮಾರ್ ಭಾಗಿಯಾದರು. ಅವರೊಂದಿಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಸಚಿವರ ರಾಮಲಿಂಗಾರೆಡ್ಡಿ, ಜೈಕಾ ಸಂಸ್ಥೆಯ ಪ್ರತಿನಿಧಿಗಳು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.