ADVERTISEMENT

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಬಸ್ ಪ್ರಯಾಣ ದರ ₹15ರಿಂದ ₹20ವರೆಗೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 9:24 IST
Last Updated 15 ಮಾರ್ಚ್ 2023, 9:24 IST
   

ಬೆಂಗಳೂರು: ಟೋಲ್ ಶುಲ್ಕ ವಸೂಲಿ ಮಾಡುತ್ತಿರುವುದರಿಂದ ಬೆಂಗಳೂರು–ಮೈಸೂರು ಬಸ್ ಪ್ರಯಾಣ ದರವನ್ನು ಕೆಎಸ್‌ಆರ್‌ಟಿಸಿ ₹15ರಿಂದ ₹20ರವರೆಗೆ ಹೆಚ್ಚಳ ಮಾಡಿದೆ.

ಟೋಲ್ ಶುಲ್ಕ ಸರಿದೂಗಿಸಲು ಕರ್ನಾಟಕ ಸಾರಿಗೆ ಬಸ್‌ ಪ್ರಯಾಣ ದರದಲ್ಲಿ ₹15, ರಾಜಹಂಸ ಬಸ್‌ ಪ್ರಯಾಣ ದರದಲ್ಲಿ ₹18, ಐರಾವತ ಸೇರಿ ಮಲ್ಟಿ ಆ್ಯಕ್ಸೆಲ್ ಬಸ್‌ಗಳ ಪ್ರಯಾಣ ದರದಲ್ಲಿ ₹20 ಹೆಚ್ಚಳ ಮಾಡಲಾಗಿದೆ. ಎಕ್ಸ್‌ಪ್ರೆಸ್ ಹೈವೆಯಲ್ಲಿ ಪ್ರಯಾಣಿಸುವ ಬಸ್‌ಗಳಿಗೆ ಮಾತ್ರ ಈ ದರ ಅನ್ವಯವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಎಕ್ಸ್‌ಪ್ರೆಸ್‌ ವೇನ ಮೊದಲ ಹಂತದ ಬೆಂಗಳೂರು–ನಿಡಘಟ್ಟ ನಡುವಿನ ಕಣಿಮಿಣಿಕೆ ಟೋಲ್ ಮೂಲಕ ಸಂಚರಿಸುವ ಬಸ್‌ಗಳಿಂದ ಮಾರ್ಚ್ 14ರಿಂದಲೇ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆರಂಭಿಸಿದೆ.

ADVERTISEMENT

ಖಾಸಗಿ ಬಸ್ ದರ ಸಹ ₹15–₹20ರವರೆಗೆ ಹೆಚ್ಚಳವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.