ADVERTISEMENT

ಬೆಂ–ಮೈ ಎಕ್ಸ್‌ಪ್ರೆಸ್‌ವೇ: ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 4:19 IST
Last Updated 14 ಮಾರ್ಚ್ 2023, 4:19 IST
   

ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ‌ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು‌.

ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಹೆದ್ದಾರಿ ಪ್ರಾಧಿಕಾರವು ಸರ್ವೀಸ್ ರಸ್ತೆಗಳನ್ನು ಪೂರ್ಣಗೊಳಿಸದೆಯೇ ಟೋಲ್ ಆರಂಭಿಸಿದೆ. ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು.

ADVERTISEMENT

ಟೋಲ್ ಸಂಗ್ರಹ ವಿರೋಧಿಸಿ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮೂರು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಪ್ರತಿಭಟನಾಕಾರರನ್ನು ರಾಮನಗರಕ್ಕೆ ಕರೆದೊಯ್ಯಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.