ADVERTISEMENT

ಭವಾನಿ ರೇವಣ್ಣ ಅರ್ಜಿ: ಇಂದು ಆದೇಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 1:20 IST
Last Updated 18 ಜೂನ್ 2024, 1:20 IST
<div class="paragraphs"><p>ಭವಾನಿ ರೇವಣ್ಣ</p></div>

ಭವಾನಿ ರೇವಣ್ಣ

   

ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇದೇ 18ರಂದು ಪ್ರಕಟಿಸಲಿದೆ.

‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಜೂನ್‌ 18) ತನ್ನ ಆದೇಶ ಪ್ರಕಟಿಸಲಿದೆ.

ADVERTISEMENT

ಏನಿದು ಪ್ರಕರಣ?: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣದ ಮೊದಲ ಆರೋಪಿ ಎಚ್‌.ಡಿ.ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಇದ್ದುದರಿಂದ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು. ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಇದೇ 7ರಂದು ಸೂಚಿಸಿತ್ತು.

ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಟೌನ್‌ ಪೊಲೀಸ್ ಠಾಣೆಯಲ್ಲಿ 2024ರ ಏಪ್ರಿಲ್ 28 ರಂದು ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.