ADVERTISEMENT

ಬಯೊಮೆಟ್ರಿಕ್ ಹಾಜರಾತಿ ಪುನರಾರಂಭ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 16:13 IST
Last Updated 4 ಡಿಸೆಂಬರ್ 2020, 16:13 IST

ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನರಾರಂಭಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚನೆ ನೀಡಿದ್ದಾರೆ.

‘ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಈ ವ್ಯವಸ್ಥೆಯನ್ನು ಮತ್ತೆ ಪ್ರಾರಂಭಿಸಬೇಕು ಮತ್ತು ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಬೇಕು’ ಎಂದು ಎಲ್ಲ ಕಾಲೇಜುಗಳ ಪ್ರಾಚಾರ್ಯರು ಮತ್ತು ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಕೋವಿಡ್‌ ಕಾರಣ ಕಳೆದ ಮೇ 31ರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ವಿನಾಯಿತಿ ನೀಡಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.