ಬೆಂಗಳೂರು: ಬಯೊಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯ ಮೂಲಕ ಹಾಜರಾತಿ ದಾಖಲಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವೇತನವನ್ನು ತಡೆಹಿಡಿಯಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಆರೋಗ್ಯ ಇಲಾಖೆಯಡಿಯ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳು ಹಾಗೂ ತರಬೇತಿ ಕೇಂದ್ರಗಳಲ್ಲಿ ಎಇಬಿಎಎಸ್ ವ್ಯವಸ್ಥೆಯ ಮೂಲಕ ಹಾಜರಾತಿ ದಾಖಲಿಸಲು, ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿತ್ತು. ಈ ಹಾಜರಾತಿಯನ್ನು ಪರಿಶೀಲಿಸಿ, ವೇತನ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಬಯೊಮೆಟ್ರಿಕ್ ಹಾಜರಾತಿ ಪ್ರಮಾಣ ತೃಪ್ತಿಕರವಾಗಿಲ್ಲ. ಆದ್ದರಿಂದ ಈ ವ್ಯವಸ್ಥೆಯಡಿ ಹಾಜರಾತಿ ದಾಖಲಿಸದವರಿಗೆ ವೇತನ ತಡೆಹಿಡಿಯಬೇಕು ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.