ADVERTISEMENT

‘ಪಾಕಿಸ್ತಾನ ಜಿಂದಾಬಾದ್’ ಕೂಗಿದ್ದು ಸಾಬೀತಾದರೆ ಗಂಭೀರ ಶಿಕ್ಷೆ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2024, 5:33 IST
Last Updated 28 ಫೆಬ್ರುವರಿ 2024, 5:33 IST
   

ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಲಾಗಿದೆ ಎಂಬ ಆರೋಪ ಸಾಬೀತಾದರೆ, ಆ ಘೋಷಣೆ ಕೂಗಿದ ವ್ಯಕ್ತಿಯನ್ನು ಗಂಭೀರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಧ್ವನಿ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಬಗ್ಗೆ ಬಿಜೆಪಿ ಮಾತ್ರವಲ್ಲ, ಮಾಧ್ಯಮಗಳು ಸಹ ಆರೋಪಿಸಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಮಂಗಳವಾರ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

ಗೆಲುವಿನ ಸಂಭ್ರಮಾಚರಣೆ ವೇಳೆ, ಕಾಂಗ್ರೆಸ್‌ನ ವಿಜೇತ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಸಮೀಪವಿದ್ದ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾನೆ ಎನ್ನಲಾಗುವ ವಿಡಿಯೊ ಕೆಲ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.