ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಪರಿಷತ್‌ನಲ್ಲಿ ಬಿಜೆಪಿ ಗದ್ದಲ ನಡೆಸಿದ್ದರಿಂದಾಗಿ ಕಲಾಪ ನಡೆಯಲಿಲ್ಲ.
10 ಗಂಟೆಗೆ ಕಲಾಪ ಆರಂಭವಾದ ಕೂಡಲೇ ಪ್ರಕರಣ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು ಮುಖ್ಯಮಂತ್ರಿ , ಗೃಹಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ತನಿಖೆ ನಡೆಯುತ್ತಿದೆ. ಅದು ಮುಗಿದ ಬಳಿಕ ಕ್ರಮ ಜರುಗಿಸುತ್ತೇವೆ. ಕಲಾಪ ನಡೆಯಲು ಅವಕಾಶ ಕೊಡಿ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಕೋರಿದರು.
ಬಿಜೆಪಿ ಸದಸ್ಯರು ಅದನ್ನು ಒಪ್ಪಲಿಲ್ಲ. ಆಡಳಿತ ಸದಸ್ಯರು–ವಿರೋಧ ಪಕ್ಷದ ಸದಸ್ಯರ ವಾಗ್ವಾದ ಜೋರಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಕೆಲ ಹೊತ್ತು ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.