ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತರು ಹಾಗೂ ಒಕ್ಕಲಿಗರ ಕಿವಿ ಮೇಲೆ ಬಿಜೆಪಿ ಸರ್ಕಾರ ಹೂವು ಇಟ್ಟಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ಮೀಸಲಾತಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ 2A ಮೀಸಲಾತಿ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ವರದಿ ನೀಡಲು ಸದ್ಯಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ. ಆಗಾದರೆ ಈ ಸಮುದಾಯಗಳಿಗೆ ಸರ್ಕಾರದ ಉತ್ತರವೇನು? ಎಂದು ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹೂವಿನ ವ್ಯಾಪಾರಿ ಇದ್ದ ಹಾಗೆ ಧಾರಾಳವಾಗಿ ಎಲ್ಲರ ಕಿವಿಗೂ ಹೂವಿಡುತ್ತಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಭ್ರಷ್ಟ ಬಿಜೆಪಿ ಸರ್ಕಾರದಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆದ 25 ಲಕ್ಷಕ್ಕೂ ಅಧಿಕ ಪದವೀಧರ ಯುವ ಸಮುದಾಯದ ನಿರೀಕ್ಷೆ ಬತ್ತಿ ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ನಡೆದ ಹಗರಣದ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಪಿಎಸ್ಐ ಹಗರಣದಲ್ಲಿ 54 ಸಾವಿರ ಸಂತ್ರಸ್ತರಿದ್ದಾರೆ ಎಂದಿದೆ.
ಪಿಎಸ್‌ಐ, ಕೆಪಿಟಿಸಿಎಲ್, ಕೆಎಂಎಫ್ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿನ ಹುದ್ದೆ ಮಾರಾಟದ ಹಗರಣವಾಗಿದೆ ಎಂದು ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಚಾಟಿ ಬೀಸಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.