ADVERTISEMENT

ಬಿಜೆಪಿ- ಜೆಡಿಎಸ್‌ನವರದ್ದು ‘ಶೋಕಿ ಯಾತ್ರೆ’: ಸಲೀಂ ಅಹಮದ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2024, 15:35 IST
Last Updated 6 ಆಗಸ್ಟ್ 2024, 15:35 IST
<div class="paragraphs"><p>ಸಲೀಂ ಅಹಮದ್‌&nbsp;</p></div>

ಸಲೀಂ ಅಹಮದ್‌ 

   

ಬೆಂಗಳೂರು: ‘ಬಿಜೆಪಿ-ಜೆಡಿಎಸ್ ಪಾದಯಾತ್ರೆ ಶೋಕಿ ಯಾತ್ರೆ’ ಎಂದು ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ಗೇಲಿ ಮಾಡಿದರು.

‘ಈ ಯಾತ್ರೆಯಲ್ಲಿ ಮುಖಂಡರು ಜನರ ಯಾವುದೇ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಜನರ ಸಂಕಷ್ಟಗಳಿಗೆ ಸ್ಪಂದಿಸದೆ, ಪ್ರತಿಷ್ಠೆಯನ್ನು ಪಣವಾಗಿಟ್ಟುಕೊಂಡು ನಡೆಸುತ್ತಿರುವ ಅವರ ಈ ಪಾದಯಾತ್ರೆಗೆ ಯಾವುದೇ ಅರ್ಥವಿಲ್ಲ’ ಎಂದು ಕಿಡಿಕಾರಿದರು.

ADVERTISEMENT

‘ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಯ ತಪ್ಪಿಲ್ಲ ಎನ್ನುವುದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಎಲ್ಲರಿಗೂ ಗೊತ್ತಿದೆ. ಆ ಕಾರಣಕ್ಕೆ ಅವರು ಈ ಪಾದಯಾತ್ರೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದಿದ್ದರು. ಜೆಡಿಎಸ್-ಬಿಜೆಪಿ ನಾಯಕರ ಮಕ್ಕಳ ನಾಯಕತ್ವದ ನಡುವಿನ ಪೈಪೋಟಿಗೆ ಅವರ ಪಾದಯಾತ್ರೆ ವೇದಿಕೆಯಾಗಿದೆ’ ಎಂದು ಟೀಕಿಸಿದರು.

‘ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವರ್ಚಸ್ಸಿಗೆ ಮಸಿ ಬಳಿಯುವ ಕೆಲಸ ಮಾಡಿದರೆ ನಾವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ’ ಎಂದೂ ಅವರು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.