ಮಹದೇಶ್ವರ ಬೆಟ್ಟ: ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಬುಧವಾರ ಚಾಲನೆ ನೀಡಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಗೃಹ ಸಚಿವ ಅರಗ ಜ್ಞಾನೇಂದ್ರ, ಇಂಧನ ಸಚಿವ ವಿ.ಸುನಿಲ್ ಕುಮಾರ್, ಶಾಸಕ ಈಶ್ವರಪ್ಪ ಅವರು ಇದ್ದ ಪ್ರಚಾರ ರಥಕ್ಕೆ ಪಕ್ಷದ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಶಾಸಕರಾದ ಸಿ.ಎಸ್.ನಿರಂಜನಕುಮಾರ್, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜಿ.ನಾರಾಯಣ ಪ್ರಸಾದ್ ಸೇರಿದಂತೆ ಪಕ್ಷದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.