ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಬಂಧನದಲ್ಲಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಭೇಟಿ ಮಾಡಲು ಬಂದಿದ್ದ ಅವರ ಆಪ್ತೆ, ಬಿಜೆಪಿ ಗ್ರಾಮಾಂತರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಗುನ್ನಾಪುರ ಅವರಿಗೆ ಭೇಟಿ ಮಾಡಲು ಅವಕಾಶ ಸಿಗಲಿಲ್ಲ.
ಬೆಳಿಗ್ಗೆಯಿಂದಲೇ ಆರೋಪಿಗಳಾದ ದಿವ್ಯಾ ಹಾಗರಗಿ, ರುದ್ರಗೌಡ ಡಿ. ಪಾಟೀಲ, ಮಂಜುನಾಥ ಮೇಳಕುಂದಿ, ಕಾಶಿನಾಥರನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ದಿವ್ಯಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಭಾಗೀರಥಿ ಕೆಲ ಹೊತ್ತು ವಿಚಾರಣೆ ನಡೆಯತ್ತಿರುವ ಐವಾನ್ ಇ ಶಾಹಿ ಅತಿಥಿ ಗೃಹದ ಆವರಣದಲ್ಲಿ ಕುಳಿತಿದ್ದರು. ಭೇಟಿಗೆ ಅವಕಾಶ ಸಿಗುವುದಿಲ್ಲ ಎಂದು ಗೊತ್ತಾದ ಬಳಿಕ ವಾಪಸ್ಸಾದರು.
ಇವುಗಳನ್ನೂ ಓದಿ...
ಪ್ರಕರಣ ಬೆಳಕಿಗೆ ಬಂದ ಬಳಿಕ ಹೇಳಿಕೆ ನೀಡಿದ್ದ ಪಕ್ಷದ ಹಲವು ನಾಯಕರು ಬಿಜೆಪಿಗೂ, ದಿವ್ಯಾ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದರು. ಇದೀಗ ಮಹಿಳಾ ಮೋರ್ಚಾ ಅಧ್ಯಕ್ಷೆ ಭೇಟಿ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.