ADVERTISEMENT

ಮೊಣಕಾಲು ಶಸ್ತ್ರಚಿಕಿತ್ಸೆ: ಬಿಜೆಪಿ ಶಾಸಕ ಬಸವರಾಜ​ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಅಕ್ಟೋಬರ್ 2023, 2:45 IST
Last Updated 17 ಅಕ್ಟೋಬರ್ 2023, 2:45 IST
<div class="paragraphs"><p>ಬಸವರಾಜ ಬೊಮ್ಮಾಯಿ,</p></div>

ಬಸವರಾಜ ಬೊಮ್ಮಾಯಿ,

   

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಬಸವರಾಜ​ ಬೊಮ್ಮಾಯಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ADVERTISEMENT

ಈ ಬಗ್ಗೆ ಟ್ವೀಟ್‌ ಮಾಡಿರುವ ಬಸವಾಜ ಬೊಮ್ಮಾಯಿ ಅವರು ಆರೋಗ್ಯವಾಗಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.