ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪ ಪ್ರಕರಣದಲ್ಲಿ ಅರಣ್ಯ ಇಲಾಖೆ ನೀಡಿರುವ ನೋಟಿಸ್ ಪ್ರಶ್ನಿಸಿ ರಾಜ್ಯಸಭಾ ಸದಸ್ಯರೂ ಆದ ನಟ ಜಗ್ಗೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
‘ಅರಣ್ಯ ಇಲಾಖೆ ನೀಡಿರುವ ನೋಟಿಸ್ ರದ್ದುಪಡಿಸಬೇಕು. ಅಧಿಕಾರಿಗಳು ಕೈಗೊಂಡ ತಪಾಸಣೆ, ಜಪ್ತಿ ಕಾನೂನು ಬಾಹಿರ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆ ಎಂದು ಘೋಷಿಸಬೇಕು. ಅರ್ಜಿಯ ವಿಚಾರಣೆ ಮುಗಿಯುವ ತನಕ ಅರಣ್ಯ ಇಲಾಖೆ ಇದೇ 25ರಂದು ನೀಡಿರುವ ನೋಟಿಸ್‌ಗೆ ತಡೆ ನೀಡಬೇಕು‘ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
‘ನೋಟಿಸ್‌ಗೆ ಉತ್ತರಿಸುವ ಮೊದಲೇ 14 ಮಂದಿ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ನಾನೊಬ್ಬ ರಾಜ್ಯಸಭಾ ಸದಸ್ಯ ಎಂಬುದನ್ನೂ ಲೆಕ್ಕಿಸದೆ ದುರುದ್ದೇಶಪೂರಿತವಾಗಿ ನಡೆದುಕೊಂಡಿದ್ದಾರೆ’ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.