ADVERTISEMENT

ಬಿಜೆಪಿ, ಆರ್‌ಎಸ್‌ಎಸ್‌ ಮೀಸಲಾತಿ ವಿರೋಧಿ: ಎಚ್.ಎಂ. ರೇವಣ್ಣ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 21:51 IST
Last Updated 4 ಅಕ್ಟೋಬರ್ 2024, 21:51 IST
ಎಚ್.ಎಂ. ರೇವಣ್ಣ ಅಧ್ಯಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ
ಎಚ್.ಎಂ. ರೇವಣ್ಣ ಅಧ್ಯಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ   

ಬೆಂಗಳೂರು: ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ಪ್ರತ್ಯೇಕ ಕಾಯ್ದೆ ರೂಪಿಸಿದ, ಹಿಂದುಳಿದ ವರ್ಗದ ಆಯೋಗ ಸ್ಥಾಪಿಸಿದ ಹಾಗೂ ಜಾತಿಗಣತಿಗೆ ಅವಕಾಶ ಮಾಡಿದ ಶ್ರೇಯ ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲುತ್ತದೆ ಎಂದು ‘ಗ್ಯಾರಂಟಿ’ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಅವರು, ಶೋಷಿತ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬೇರೆ ರಾಜ್ಯಗಳಿಗಿಂತ ಕರ್ನಾಟಕವೇ ಮುಂದಿದೆ. ಆದರೂ, ‘ಕರ್ನಾಟಕದಲ್ಲಿ ದಲಿತ ಮತ್ತು ಹಿಂದುಳಿದವರ ಮೀಸಲಾತಿ ಕಸಿಯಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹರಿಯಾಣ ಚುನಾವಣಾ ಪ್ರಚಾರದ ವೇಳೆ ನೀಡಿದ ಹೇಳಿಕೆ ಖಂಡನೀಯ ಎಂದರು. 

ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್, ದಲಿತರು ಹಾಗೂ ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗುತ್ತಿದೆ ಎನ್ನುವ ಪ್ರಧಾನಮಂತ್ರಿ ಆರೋಪ ಸತ್ಯಕ್ಕೆ ದೂರ‘ ಎಂದು ಅಲ್ಲಗಳೆದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.