ADVERTISEMENT

ಬಿಜೆಪಿ ಟಿಕೆಟ್ ವಂಚನೆ: ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2023, 11:18 IST
Last Updated 19 ಸೆಪ್ಟೆಂಬರ್ 2023, 11:18 IST
<div class="paragraphs"><p>ಹಾಲಶ್ರೀ ಸ್ವಾಮೀಜಿ</p></div>

ಹಾಲಶ್ರೀ ಸ್ವಾಮೀಜಿ

   

ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಆರೋಪಿಯಾಗಿರುವ ಹೊಸಪೇಟೆಯ ಹಿರೇಹಡಗಲಿಯ ಅಭಿನವ ಹಾಲಶ್ರೀ ಮಠದ ಹಾಲವೀರಪ್ಪ ಸ್ವಾಮೀಜಿ ಒಡಿಶಾದಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಹಣ ಪಡೆದು ವಂಚಿಸಿದ್ದ ಪ್ರಕರಣದ ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ಆರೋಪಿ ಚೈತ್ರಾ ಕುಂದಾಪುರ ಹಾಗೂ ಇತರರನ್ನು ಬಂಧಿಸಿದ್ದಾರೆ.

ADVERTISEMENT

ಪ್ರಕರಣ ಆರೋಪಿ ಹಾಲವೀರಪ್ಪ ಸ್ವಾಮೀಜಿ ಸಹ ದೂರುದಾರರಿಂದ ₹1.50 ಕೋಟಿ ಪಡೆದಿರುವ ಆರೋಪವಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಸ್ವಾಮೀಜಿ ತಲೆಮರೆಸಿಕೊಂಡಿದ್ದರು.

‘ಬೆಂಗಳೂರಿನಿಂದ ಮೈಸೂರಿಗೆ ಹೋಗಿದ್ದ ಸ್ವಾಮೀಜಿ, ಅಲ್ಲಿಂದ ಒಡಿಶಾಗೆ ಹೋಗಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ವಿಶೇಷ ತಂಡ ಒಡಿಶಾಗೆ ಹೋಗಿತ್ತು. ಅದು ಗೊತ್ತಾಗುತ್ತಿದ್ದಂತೆ, ಸ್ವಾಮೀಜಿ ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ತೆರಳುತ್ತಿದ್ದರು. ಈ ಮಾಹಿತಿ ಸಿಗುತ್ತಿದ್ದಂತೆ, ರೈಲು ಪ್ರಯಾಣದ ವೇಳೆಯಲ್ಲೇ ಸ್ವಾಮೀಜಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ’ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ವಿಶೇಷ ತಂಡದ ಸಿಬ್ಬಂದಿ, ಸ್ವಾಮೀಜಿಯನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಅವರು ಬಂದ ನಂತರವೇ ಮುಂದಿನ ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.