ADVERTISEMENT

ವಂಚನೆ ಪ್ರಕರಣ | ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 16:13 IST
Last Updated 6 ಡಿಸೆಂಬರ್ 2023, 16:13 IST
<div class="paragraphs"><p>ಚೈತ್ರಾ</p></div>

ಚೈತ್ರಾ

   

ಬೆಂಗಳೂರು: ಹೋಟೆಲ್‌ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡುಸುವುದಾಗಿ ನಂಬಿಸಿ, ಹಣ ಪಡೆದು ವಂಚಿಸಿದ್ದ ಆರೋಪದ ಅಡಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಹಿಂದುತ್ವಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾದರು.

ಈ ಪ್ರಕರಣದಲ್ಲಿ ಚೈತ್ರಾ ಹಾಗೂ ಶ್ರೀಕಾಂತ್‌ಗೆ ಎರಡು ದಿನಗಳ ಹಿಂದೆ ನ್ಯಾಯಾಲಯವು ಜಾಮೀನು ನೀಡಿತ್ತು. ಚೈತ್ರಾ ಪರ ವಕೀಲರು ಕಾರಾಗೃಹದ ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶ ನೀಡಿದರು. ಬಳಿಕ ಕಾರಾಗೃಹದ ಸಿಬ್ಬಂದಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ, ಬುಧವಾರ ರಾತ್ರಿ ಬಿಡುಗಡೆ ಮಾಡಿದರು.

ADVERTISEMENT

‘ಚೈತ್ರಾ ಸೇರಿದಂತೆ ಹಲವರು ಹಣ ಸುಲಿಗೆ ಮಾಡಿದ್ದಾರೆ’ ಎಂದು ಆರೋಪಿಸಿ ಗೋವಿಂದ ಬಾಬು ಪೂಜಾರಿ ಬಂಡೆಪಾಳ್ಯ ಠಾಣೆಗೆ ದೂರು ನೀಡಿದ್ದರು. ಪೊಲೀಸ್‌ ಆಯುಕ್ತರ ಸೂಚನೆ ಮೇರೆಗೆ ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಉಡುಪಿಯಲ್ಲಿ ಚೈತ್ರಾ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.