ಬೆಂಗಳೂರು: ಗಾಳಿಪಟಗಳನ್ನು ಹಾರಿಸುವ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಗಾಳಿಪಟಗಳಿಗೆ ಹತ್ತಿಯಿಂದ ಮಾಡಿದ ದಾರಗಳನ್ನು ಮಾತ್ರ ಬಳಸಬೇಕು ಎಂದು ಸೂಚಿಸಿದೆ.
ಯಾವುದೇ ವ್ಯಕ್ತಿ, ಅಂಗಡಿಗಳು, ಸಗಟು ಮತ್ತು ಚಿಲ್ಲರೆ ಮಾರಾಟಗಾರರು, ನೈಲಾನ್ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಬಳಸಿ ಚೀನಿ ಮಾಂಜಾ, ಚೀನಿ ದಾರಗಳನ್ನು ತಯಾರು ಮಾಡುವುದು, ದಾಸ್ತಾನು ಮಾಡುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇವುಗಳನ್ನು ಗಾಳಿಪಟಗಳಿಗೆ ಬಳಸುವಂತಿಲ್ಲ ಎಂದು ಹೇಳಿದೆ.
ಹತ್ತಿಯಿಂದ ಮಾಡಿದ ದಾರಗಳಿಗೂ ಹರಿತ, ಲೋಹ ಅಥವಾ ಗಾಜಿನ ವಸ್ತುಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.