ಬೆಂಗಳೂರು: ಕೆಎಸ್‌ಡಿಎಲ್ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ಪಕ್ಷದಿಂದಲೂ ಅವರನ್ನು ಉಚ್ಚಾಟಿಸುವ ಸಾಧ್ಯತೆ ಇದೆ.
ಕೆಎಸ್‌ಡಿಎಲ್ ಟೆಂಡರ್‌ಗೆ ಸಂಬಂಧಿಸಿದಂತೆ ಕಾರ್ಯಾದೇಶ ನೀಡಲು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ₹ 40 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.
ವಿರೂಪಾಕ್ಷಪ್ಪ ಅವರ ವಿರುದ್ಧದ ಕ್ರಮದ ಬಗ್ಗೆ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಮಾಹಿತಿ ನೀಡುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.