ನವದೆಹಲಿ: ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ರಯಾಣಿಕ ರೈಲು ಆರಂಭಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಬುಧವಾರ ಆಗ್ರಹಿಸಿದರು.
ಈ ರೈಲು ಓಡಾಟ ಆರಂಭವಾದರೆ, ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು ಎಂದು ವಿನಂತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.