ADVERTISEMENT

ಹಳದಿ ಎಲೆ ರೋಗಕ್ಕೆ ಪರಿಹಾರ: ಸಂಸದ ಬೃಜೇಶ್ ಚೌಟ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 15:53 IST
Last Updated 25 ಜುಲೈ 2024, 15:53 IST
<div class="paragraphs"><p>ಬೃಜೇಶ್ ಚೌಟ</p></div>

ಬೃಜೇಶ್ ಚೌಟ

   

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಬೃಜೇಶ್ ಚೌಟ ಲೋಕಸಭೆಯಲ್ಲಿ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.  

ದಕ್ಷಿಣ ಕನ್ನಡದಲ್ಲಿ ಶೇ 50ರಷ್ಟು ಕೃಷಿ ಭೂಮಿಯಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು. ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ ಎಂದರು. 

ADVERTISEMENT

ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಿಕೆ ಬೆಳೆಯಲಾಗಿದೆ. ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16,000 ಹೆಕ್ಟೇರ್ ಕೃಷಿ ಪ್ರದೇಶದ ಅಡಿಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ವರದಿ ನೀಡಿದೆ ಎಂದು ಅವರು ಸದನದ ಗಮನಕ್ಕೆ ತಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.