ಬೆಂಗಳೂರು: ಬಿ.ಎಸ್ಸಿ ಕೃಷಿ ಮತ್ತು ಪಶು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ವಿಶೇಷ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ರಾತ್ರಿ ಪ್ರಕಟಿಸಲಿದೆ.
ಬುಧವಾರ ಅಂತಿಮ ಫಲಿತಾಂಶ ಪ್ರಕಟಿಸಲಿದ್ದು, ನಂತರ ಶುಲ್ಕ ಪಾವತಿಸಿ ನ.15ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಪಶು ವೈದ್ಯಕೀಯ ಕೋರ್ಸ್ ನ 58 ಸೀಟುಗಳು ಸೇರಿದಂತೆ ಒಟ್ಟು 338 ಕೃಷಿ ವಿಜ್ಞಾನ ಕೋರ್ಸ್‌ನ ಸೀಟು ಹಂಚಿಕೆ ಮಾಡಲಾಗಿದೆ. ಇದಕ್ಕೆ 1800 ಮಂದಿ ಆಪ್ಷನ್ಸ್ ದಾಖಲು ಮಾಡಿದ್ದರು ಎಂದು ಅವರು ವಿವರಿಸಿದರು.
ಆಯುಷ್ ಸೀಟು ಹಂಚಿಕೆ
ಆಯುಷ್ ಕೋರ್ಸ್ ಗಳ ಸ್ಟ್ರೇ ವೇಕೇನ್ಸಿ ಸುತ್ತಿನ ಸೀಟು ಹಂಚಿಕೆಯಾಗಿದ್ದು ನ.15ರೊಳಗೆ ಶುಲ್ಕ ಪಾವತಿಸಿ ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.