ಕಲಬುರ್ಗಿ:ಮುಖ್ಯಮಂತ್ರಿಬಿ.ಎಸ್ ಯಡಿಯೂರಪ್ಪಅವರ ವಿರುದ್ಧ ಅಪರೇಷನ್ ಕಮಲ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ವಕೀಲರನ್ನು (ಎಸ್‌ಪಿಪಿ) ನೇಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಸೋಮವಾರ ಹೈಕೋರ್ಟ್‌ನ್ಯಾಯಮೂರ್ತಿ ಮಹ್ಮದ್ ನವಾಜ್ ಅವರು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುತ್ತಿದ್ದಂತೆಯೇ ನ್ಯಾಯಪೀಠಕ್ಕೆ ಈ ವಿಷಯ ತಿಳಿಸಿದಸರ್ಕಾರಿ ವಕೀಲರು, ಇದಕ್ಕಾಗಿ ಕಾಲಾವಕಾಶ ನೀಡುವಂತೆ ಕೋರಿದರು.
‘ಯಡಿಯೂರಪ್ಪ ಅವರು ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ, ನಿಮ್ಮ ತಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದರೆ ₹ 10 ಕೋಟಿ ನೀಡುವುದಾಗಿ ದೂರವಾಣಿ ಕರೆ ಮಾಡಿ ಆಮಿಷ ಒಡ್ಡಿದ್ದರು’ ಎಂದುಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ತಡೆಯಾಜ್ಞೆ ತೆರವಿಗೆ ಆಗ್ರಹಿಸಿ ಶರಣಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್, ಶಾಸಕ ಪ್ರೀತಂಗೌಡ ಪರವಾಗಿ ಅಶೋಕ ಹಾರನಹಳ್ಳಿ, ಕಂದಕೂರ ಪರವಾಗಿಪಿ.ವಿಲಾಸಕುಮಾರ್ ಹಾಜರಾಗಿದ್ದರು.
ಪ್ರಕರಣದ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.