ಕಲಬುರ್ಗಿ: ‘ಸಿದ್ದರಾಮಯ್ಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುವುದಾಗಿ ಹೇಳಿದ್ದಾರೆ. ಎರಡು ಪಕ್ಷಗಳ ನಾಯಕರ ಕಚ್ಚಾಟದಿಂದಜನರಿಗೆ ಬೇಸರವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಲೋಕಸಭಾ ಚುನಾವಣೆಯಲ್ಲಿ ಒಬ್ಬರಿಗೊಬ್ಬರು ಚೂರಿ ಹಾಕಿ ತಮ್ಮ ಬೇಳೆ ಬೇಯಿಸಿಕೊಂಡಿದ್ದಾರೆ. ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಪಕ್ಷಕ್ಕೆ ಹಿನ್ನಡೆಯಾಗುತ್ತೆ ಅಂತ ಗೊತ್ತಾಗಿದ್ದು, ಫಲಿತಾಂಶದ ಬಳಿಕ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತದೆ. ಮುಂದೆ ಏನು ಬೇಕಾದರೂ ಆಗಬಹುದು’ ಎಂದು ಹೇಳಿದರು.
ಫಲಿತಾಂಶದ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಕೆ.ಸಿ. ವೇಣುಗೋಪಾಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ಅವರು, ‘ವೇಣುಗೋಪಾಲ್‌ಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ?, ಕರ್ನಾಟಕದ ಯಾವ ಮೂಲೆಗೆ ಹೋಗಿ ಬಂದಿದ್ದಾರೆ ? ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಹೋಗಲು ತಲೆಕೆಟ್ಟಿದೆಯಾ? ಎಂದು ಪ್ರಶ್ನಿಸಿದರು.
ಪ್ರಿಯಾಂಕ್ ಖರ್ಗೆ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಮೊದಲು ಅವರು ಚುನಾವಣೆಯಲ್ಲಿ ಗೆದ್ದು ತೋರಿಸಲಿ. ನಾವು ಕಲಬುರ್ಗಿ ಮತ್ತು ಚಿಂಚೋಳಿಯಲ್ಲಿ ಗೆದ್ದೆ ಗೆಲ್ಲುತ್ತೇವೆ. ಹಣದ ಚೀಲ ತುಂಬಿಕೊಂಡು ಬಂದು ಮೈತ್ರಿ ನಾಯಕರು ಕ್ಷೇತ್ರದಲ್ಲಿ ಕೂತಿದ್ದಾರೆ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.