ADVERTISEMENT

ಬಿಎಸ್‌ವೈ: ಪೋಕ್ಸೊ ಪ್ರಕರಣ 19ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 16:30 IST
Last Updated 9 ಸೆಪ್ಟೆಂಬರ್ 2024, 16:30 IST
<div class="paragraphs"><p> ಬಿಎಸ್‌ವೈ </p></div>

ಬಿಎಸ್‌ವೈ

   

ಬೆಂಗಳೂರು: ‘ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ; ಪೊಲೀಸರು ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ’ ಎಂಬ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಪುನಃ ವಿಸ್ತರಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸೋಮವಾರ ವಿಚಾರಣೆ ನಡೆಸಿದರು.

ADVERTISEMENT

ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ ಪರ ಹಾಜರಾಗಿದ್ದ ಅಶೋಕ್‌ ಎನ್‌.ನಾಯಕ್ ಅವರು, ‘ಈ ಪ್ರಕರಣದಲ್ಲಿ ಸರ್ಕಾರವು ವಿಶೇಷ ಪ್ರಾಸಿಕ್ಯೂಟರ್‌ ಆಗಿ ಹಿರಿಯ ವಕೀಲ ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿದೆ. ಅವರಿಗೆ ಪ್ರಕರಣದ ಮಾಹಿತಿ ನೀಡಬೇಕಿರುವ ಕಾರಣ ವಿಚಾರಣೆ ಮುಂದೂಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.