ADVERTISEMENT

ಬಿ.ವೈ. ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಿದ್ದು ಒಳ್ಳೆಯ ಬೆಳವಣಿಗೆ: ಪ್ರತಾಪ ಸಿಂಹ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2023, 12:40 IST
Last Updated 11 ನವೆಂಬರ್ 2023, 12:40 IST
ಪ್ರತಾಪ ಸಿಂಹ
ಪ್ರತಾಪ ಸಿಂಹ   ಪ್ರಜಾವಾಣಿ ಚಿತ್ರ

ಮೈಸೂರು: ‘ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದು ಒಳ್ಳೆಯ ಬೆಳವಣಿಗೆ’ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

ಇಲ್ಲಿ ‍ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಎಲ್ಲ ಕ್ಷೇತ್ರದಲ್ಲೂ ಯುವಕರಿಗೆ ಮಣೆ ಹಾಕಲಾಗುತ್ತಿದೆ. ವಿಜಯೇಂದ್ರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದವರು’ ಎಂದರು.

‘ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಅವರ ಅನುಭವ– ಮಾರ್ಗದರ್ಶನ ವಿಜಯೇಂದ್ರ ಅವರಿಗೆ ಸಿಗುವುದರಿಂದ ಸಂಘಟನೆಯಲ್ಲಿ ಯಶಸ್ವಿಯಾಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ನಾವೆಲ್ಲರೂ ಗೆದ್ದು ಬಂದಿದ್ದೇವೆ. ಮುಂದಿನ ಚುನಾವಣೆಯಲ್ಲೂ ಅವರ ಹೆಸರಿನಲ್ಲೇ ಗೆಲ್ಲಲಿದ್ದೇವೆ. ಬಿಜೆಪಿ ಬಹುಮತ ಗಳಿಸಲಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.