ಬೆಂಗಳೂರು: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ತೆರವುಗೊಳಿಸಿದ ತಕ್ಷಣ ಸಿಬ್ಬಂದಿಗೆ ಬಾಕಿ ವೇತನ ಪಾವತಿಸುವುದಾಗಿ ಬೈಜೂಸ್ ಹೇಳಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸೋಮವಾರ ಬೈಜೂಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಿಬ್ಬಂದಿ ವೇತನ ಬಾಕಿ ಪಾವತಿ ಕುರಿತು ಚರ್ಚಿಸಿದರು.
ಬೈಜೂಸ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಪ್ರಕರಣ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಮುಂದಿದೆ. ಕೆಲವೇ ದಿನಗಳಲ್ಲಿ ವಿಚಾರಣೆ ಬರಲಿದೆ. ಬ್ಯಾಂಕ್ ಖಾತೆಗಳಲ್ಲಿ ವ್ಯವಹಾರ ಮುಂದುವರಿಸಲು ಅನುಮತಿ ನೀಡಿದ ತಕ್ಷಣ ಬಾಕಿ ವೇತನ ಪಾವತಿಸಲಾಗುವುದು ಎಂದು ಬೈಜೂಸ್‌ನ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.