ಬೆಂಗಳೂರು: ನಾನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಲವಾದ ನಂಬಿಕೆ ಇಟ್ಟಿದ್ದೇನೆ. ಉಪಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ನಾನುಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ವಿಪಕ್ಷ ನಾಯಕಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳಿಸಿದ್ದೇನೆ. ರಾಜ್ಯ ಉಸ್ತುವಾರಿ ಕಾರ್ಯದರ್ಶಿವೇಣುಗೋಪಾಲ್ ಅವರಿಗೆ ಈಗ ಸಲ್ಲಿಸುತ್ತೇನೆ’ ಎಂದು ಹೇಳಿದರು.
ಮತದಾರರು ಅನರ್ಹ ಶಾಸಕರಿಗೆ ಪಾಠ ಕಲಿಸುತ್ತಾರೆ ಎಂಬ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.