ADVERTISEMENT

BJP ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್: ಸಿ.ಟಿ. ರವಿ ಪ್ರತಿಕ್ರಿಯೆ ಹೀಗಿತ್ತು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜುಲೈ 2023, 10:21 IST
Last Updated 29 ಜುಲೈ 2023, 10:21 IST
ಸಿಟಿ ರವಿ
ಸಿಟಿ ರವಿ   

ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್‌ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ತೆಲಂಗಾಣದ ಬಂಡಿ ಸಂಜಯ್ ಸೇರಿದಂತೆ 8 ಜನರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಿರುವ ಕುರಿತು ಟ್ವೀಟ್ ಮಾಡಿರುವ ಸಿ.ಟಿ ರವಿ, ‘ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿ ಅವಕಾಶ ಮಾಡಿಕೊಟ್ಟ ಸನ್ಮಾನ್ಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ತುಂಬು ಹೃದಯದ ಧನ್ಯವಾದಗಳು’ ಎಂದಿದ್ದಾರೆ.

ADVERTISEMENT

‘ಈ ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಬದುಕಿಗೆ ಹೊಸ ಆಯಾಮಗಳನ್ನು ನೀಡಿದೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದವರೆಗಿನ ನನ್ನ ಪಯಣದಲ್ಲಿ ನಿರಂತರವಾಗಿ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ, ಇನ್ನು ಮುಂದೆಯೂ ಅದೇ ಭಾವದಿಂದ ಕೆಲಸ, ಪಕ್ಷ ನೀಡಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ’ ಎಂದು ಸಿ.ಟಿ.ರವಿ ಹೇಳಿದ್ದಾರೆ.

13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.

ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಕೋಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ... ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.