ಬೆಂಗಳೂರು: ಹೊಸಪೇಟೆಯಲ್ಲಿ ಅ.12, 13ರಂದು ದಕ್ಷಿಣ ಭಾರತಮಟ್ಟದ ಚಾರ್ಟರ್ಡ್ ಅಕೌಂಟೆಂಟ್‌ಗಳ 55ನೇ ಸಮಾವೇಶ ನಡೆಯಲಿದೆ.
ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್‌ನ ಬಳ್ಳಾರಿ ಶಾಖೆಯ ಸಹಯೋಗದಲ್ಲಿ ನಡೆಯುವ ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಶರಣಬಸಪ್ಪ ದರ್ಶನಾಪುರ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿರುವರು.
ಹೊಸಪೇಟೆ ಶಾಸಕರಾದ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸುವರು. ಐಸಿಎಐ ಅಧ್ಯಕ್ಷರಾದ ಅನಿಕೇತ್ ಎಸ್. ತಲಾಟಿ, ಉಪಾಧ್ಯಕ್ಷ ರಂಜಿತ್ ಅಗರವಾಲ್ ಭಾಗವಹಿಸುವರು.
ದಕ್ಷಿಣ ಭಾರತದ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸುಮಾರು ಮೂರು ಸಾವಿರ ಚಾರ್ಟರ್ಡ್ ಅಕೌಂಟೆಂಟ್‌ಗಳು ಭಾಗವಹಿಸುವರು. ವರ್ಚುವಲ್ ಆಗಿ ಏಳು ಸಾವಿರ ಮಂದಿ ಪಾಲ್ಗೊಳ್ಳುವರು. ಜಿಎಸ್‌ಟಿ, ಫೆಮಾ, ಆದಾಯ ತೆರಿಗೆ, ಮಾಹಿತಿ ತಂತ್ರಜ್ಞಾನ, ಕಂಪನಿ ಕಾಯ್ದೆ ಮತ್ತು ನೇರ ತೆರಿಗೆ ವಿಷಯಗಳ ಕುರಿತು ವಿಶೇಷ ತಜ್ಞರು, ಹಲವು ತಂತ್ರಜ್ಞರು ಉಪನ್ಯಾಸ ನೀಡುವರು ಎಂದು ಎಸ್‌ಐಆರ್‌ಸಿ ಅಧ್ಯಕ್ಷ ಎಸ್. ಪನ್ನಾರಾಜ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.