ಬೆಂಗಳೂರು: ‘ಲೋಕಸಭಾ ಚುನಾವಣಾ ದೃಷ್ಟಿಯಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆಮ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ’ ಎಂದರು.
‘ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.