ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಮುಂಬೈ ಕರ್ನಾಟಕ ಭಾಗಕ್ಕೆ ಸಿಂಹಪಾಲು ಸಿಕ್ಕಿದ್ದು, ಬೆಂಗಳೂರು ನಗರದಿಂದ ನಾಲ್ವರು ಸಚಿವ ಸ್ಥಾನ ಅಲಂಕರಿಸಿದ್ದಾರೆ.
ಕರಾವಳಿ ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಹಳೆ ಮೈಸೂರು ಭಾಗದಲ್ಲಿ ತುಮಕೂರು, ಚಿತ್ರದುರ್ಗ ಹೊರತುಪಡಿಸಿದರೆ ಉಳಿದ ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ.
ಮುಂಬೈ ಕರ್ನಾಟಕ ಭಾಗದ 6 ಮಂದಿ ಶಾಸಕರು ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದು,ಬೆಳಗಾವಿ ಜಿಲ್ಲೆಯಿಂದ ಇಬ್ಬರಿಗೆ ಅದೃಷ್ಟ ಒಲಿದು ಬಂದಿದೆ. ಉಳಿದಂತೆ ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ ಜಿಲ್ಲೆಯಿಂದ ತಲಾ ಒಬ್ಬರಿಗೆ ಪಡೆದುಕೊಂಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಪ್ರಭು ಚವ್ಹಾಣ್ ಮೊದಲ ಬಾರಿಗೆ ಸಚಿವರಾಗಿದ್ದು, ಹೈದರಾಬಾದ್ ಕರ್ನಾಟಕ ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿದಂತಾಗಿದೆ. ಆ ಭಾಗದ ಕಲಬುರ್ಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಂದ ಯಾರೊಬ್ಬರೂ ಸಚಿವರಾಗಿಲ್ಲ.
ಹಳೆ ಮೈಸೂರು ನಿರ್ಲಕ್ಷ್ಯ: ದಕ್ಷಿಣ ಭಾಗದ ಜಿಲ್ಲೆಗಳಿಗೆ ಕನಿಷ್ಠ ಪ್ರಾತಿನಿಧ್ಯವನ್ನೂ ಬಿಜೆಪಿ ಸರ್ಕಾರ ನೀಡಿಲ್ಲ. ಮೈಸೂರು ಜಿಲ್ಲೆಯಲ್ಲಿ ಶಾಸಕರಿದ್ದರೂ ಅವಕಾಶ ವಂಚಿತರಾಗಿದ್ದಾರೆ.ಬಿಜೆಪಿ ಶಾಸಕರು ಇರುವ ಕೊಡಗು, ದಾವಣಗೆರೆ, ಹಾಸನ,ಚಾಮರಾಜನಗರ ಜಿಲ್ಲೆಗಳಿಂದ ಯಾರೊಬ್ಬರೂ ಸಚಿವರಾಗಿಲ್ಲ.
* ಇವನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.