ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ರಚನೆ ಮಾಡುತ್ತಿದ್ದಂತೆ ಅನರ್ಹ ಶಾಸಕರು ಮಂಗಳವಾರ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಇದಕ್ಕೂ ಮುನ್ನ ರಮೇಶ್ ಜಾರಕಿಹೊಳಿ ಮನೆಯಲ್ಲಿ ಸೇರಿದ್ದ ಅನರ್ಹ ಶಾಸಕರು ಮುಂದಿನ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದರು. 17 ಶಾಸಕರಿಗಷ್ಟೇ ಸಚಿವ ಸ್ಥಾನ ನೀಡಿದ್ದು, ಇನ್ನೂ 16 ಸಚಿವ ಸ್ಥಾನಗಳನ್ನು ಮುಖ್ಯಮಂತ್ರಿ ಖಾಲಿ ಉಳಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ 16ರಲ್ಲಿ 11 ಸ್ಥಾನಗಳನ್ನು ಬಿಜೆಪಿ ಸರ್ಕಾರ ರಚನೆಗೆ ಸಹಕರಿಸಿದ ಅನರ್ಹ ಶಾಸಕರಿಗೆ ನೀಡುವುದಾಗಿ ಅವರು ಭರವಸೆ ನೀಡಿರುವ ಬಗ್ಗೆ ಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.
ಮುಂದೆಸಚಿವ ಸ್ಥಾನ ಸಿಗುವುದು ಖಚಿತವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿರುವ ಪ್ರಕರಣದಲ್ಲಿ ಜಯ ಸಾಧಿಸಲು ಏನೆಲ್ಲ ಮಾಡ
ಬೇಕು ಎಂಬ ಕುರಿತೂ ಚರ್ಚಿಸಿದ್ದಾರೆ. ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
* ಇವನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.