ಬೆಂಗಳೂರು: ಅಂಗವಿಕಲರ ಹಕ್ಕುಗಳ ರಕ್ಷಣೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಕಡೆಗಣಿಸಿದೆ. ಅಂಗವಿಕಲರ ಹಕ್ಕುಗಳ ನಿಯಮಗಳ ಅಡಿ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ವಿಫಲವಾಗಿದೆ ಎಂದು ಮಹಾಲೇಖಪಾಲರ (ಸಿಎಜಿ) ವರದಿ ಹೇಳಿದೆ.
2016–17ನೇ ಆರ್ಥಿಕ ವರ್ಷದಿಂದ 2022–23ನೇ ಆರ್ಥಿಕ ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರದ ಕಾರ್ಯವೈಖರಿಯ ಲೆಕ್ಕಪರಿಶೋಧನೆ ನಡೆಸಲಾಗಿತ್ತು.
ಅಂಗವಿಕಲ ವ್ಯಕ್ತಿಗಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಜೀವನವನ್ನು ಉತ್ತಮಗೊಳಿಸುವ ಉದ್ದೇಶದಿಂದ 2016ರಲ್ಲಿ ಅಂಗವಿಕಲರ ಹಕ್ಕುಗಳ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈ ಕಾಯ್ದೆಯ ಅಡಿಯಲ್ಲಿ ಅಂಗವಿಕಲರ ಬದುಕನ್ನು ಸುಲಭವಾಗಿಸುವ ವಿವಿಧ ಸವಲತ್ತುಗಳು ಮತ್ತು ನೆರವುಗಳನ್ನು ಒದಗಿಸಬೇಕಿತ್ತು. ಆದರೆ ಈ ಕೆಲಸ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಆಗಿಲ್ಲ ಎಂದು ವರದಿ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.