ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಮಂಜೂರು ಮಾಡಿದ್ದ ಜಾಮೀನು ರದ್ದುಪಡಿಸುವಂತೆ ಕೋರಿದ ಅರ್ಜಿಯ ಮೇಲಿನ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದೆ.
ಈ ಸಂಬಂಧ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಸುದೀರ್ಘ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿದರು.
ಎಸ್‌ಐಟಿ ಪರ ವಿಶೇಷ ಪ್ರಾಸಿಕ್ಯೂಟರ್ ಆದ ಹಿರಿಯ ವಕೀಲ ರವಿವರ್ಮ ಕುಮಾರ್ ಮತ್ತು ಎಚ್.ಡಿ.ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.