ADVERTISEMENT

ಕಾರು ಅಪಘಾತ: ಕೇಂದ್ರ ಸಚಿವ ಶ್ರೀಪಾದ ನಾಯಕ್‌ಗೆ ಗಾಯ, ಪತ್ನಿ ವಿಜಯಾ ಸಾವು

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 17:38 IST
Last Updated 11 ಜನವರಿ 2021, 17:38 IST
ಗಾಯಗೊಂಡ ಸಚಿವರನ್ನು ಆಂಬುಲೆನ್ಸ್‌ನಲ್ಲಿ ಗೋವಾಕ್ಕೆ ಕಳುಹಿಸಿಕೊಡಲಾಯಿತು‌
ಗಾಯಗೊಂಡ ಸಚಿವರನ್ನು ಆಂಬುಲೆನ್ಸ್‌ನಲ್ಲಿ ಗೋವಾಕ್ಕೆ ಕಳುಹಿಸಿಕೊಡಲಾಯಿತು‌   

ಅಂಕೋಲಾ: ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ ನಾಯಕ್ ಅವರ ಕಾರು ತಾಲ್ಲೂಕಿನ ಹೊಸಕಂಬಿ ಚೆಕ್‌ಪೋಸ್ಟ್ ಬಳಿ ಸೋಮವಾರ ಸಂಜೆ ಪಲ್ಟಿಯಾಗಿದೆ. ಅಪಘಾತದಲ್ಲಿ ಅವರ ಪತ್ನಿ ವಿಜಯಾ ನಾಯಕ್ (55) ಹಾಗೂ ಕಾರಿನಲ್ಲಿದ್ದ ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ದುಮೆಎಂಬುವವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ.

ವಿಜಯಾ ಅವರನ್ನು ಅಂಕೋಲಾದ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯೆ ನಿಧನರಾದರು. ಸಚಿವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅಂಕೋಲಾದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್‌ನಲ್ಲಿ ಗೋವಾಕ್ಕೆ ಕಳುಹಿಸಿಕೊಡಲಾಯಿತು.

ಸಚಿವರ ಕಾರು ಅಪಘಾತಕ್ಕೀಡಾಗಿರುವುದು

ಯಲ್ಲಾಪುರದ ಗಂಟೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದರು. ಹೊಸಕಂಬಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಯಿತು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅಂಕೋಲಾಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.

ಕಾರಿನಲ್ಲಿ ಶ್ರೀಪಾದ ನಾಯಕ್, ಅವರ ಪತ್ನಿ ವಿಜಯಾ ನಾಯಕ್, ದೀಪಕ್ ದುಬೆ, ಗನ್‌ಮ್ಯಾನ್ ತುಕಾರಾಂ ಪಾಟೀಲ, ಸಾಯಿ ಕಿರಣ ಶೇಟಿಯಾ ಪ್ರಯಾಣಿಸುತ್ತಿದ್ದರು. ಸೂರಜ್ ನಾಯ್ಕ ಕಾರು ಚಲಾಯಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.