ಬೆಂಗಳೂರು: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಹೋಟೆಲ್‌ನಲ್ಲಿ ಕುಳಿತು ಊಟ ಮಾಡಿದ್ದ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ (ಎನ್‌ಡಿಎಂಎ) ಪ್ರಕರಣ ದಾಖಲಾಗಿದೆ.
‘ನಿಯಮ ಉಲ್ಲಂಘನೆ ಬಗ್ಗೆ ವಿಜಯ್ ಡೇನಿಸ್ ಎಂಬುವರು ದೂರು ನೀಡಿದ್ದರು. ವಿಚಾರಣೆ ನಡೆಸಿ ಕಾಯ್ದೆಯಡಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಗಮನಕ್ಕೆ ತರಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಇದು ಎಫ್‌ಐಆರ್ ಅಲ್ಲ. ಕಾಯ್ದೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ತಿಳಿಸಿದರು.
‘ರಾಜ್ಯದ ಎಲ್ಲ ಹೋಟೆಲ್‌ಗಳಲ್ಲಿ ಆಹಾರ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ, ತೇಜಸ್ವಿ ಸೂರ್ಯ ಅವರು ನೃಪತುಂಗ ರಸ್ತೆಯಲ್ಲಿರುವ ಹೊಟೇಲೊಂದರಲ್ಲಿ ಕುಳಿತು ಗಾಯಕ ವಿಜಯ್ ಪ್ರಕಾಶ್ ಜೊತೆ ಊಟ ಮಾಡಿದ್ದರು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದನ್ನೇ ಆಧರಿಸಿ ವಿಜಯ್ ದೂರು ನೀಡಿದ್ದರು’ ಎಂದೂ
ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.