ಬೆಂಗಳೂರು: ‘ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿಯ ಶಾಸಕ ಮುನಿರತ್ನ ಅವರು ಗುತ್ತಿಗೆದಾರನಿಂದ ಲಂಚ ಕೇಳುವ ಸಂದರ್ಭದಲ್ಲಿ ನನ್ನನ್ನು ಗುರಿಯಾಗಿಸಿ ಜಾತಿನಿಂದನೆ ಮಾಡಿದ್ದಾರೆ’ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಸದಸ್ಯ ವೇಲುನಾಯ್ಕರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಪ್ರಕಟಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಆಪ್ತರಾದ ಬಿ.ಎನ್.ಲೋಹಿತ್ ಅಲಿಯಾಸ್ ಲೋಹಿತ್ ಗೌಡ, ಸಿ.ಕಿರಣ್ ಕುಮಾರ್ ಅಲಿಯಾಸ್ ಕಿರಣ್ ಕುಮಾರ್ ಮತ್ತು ಎನ್. ಮಂಜುನಾಥ್ ಅಲಿಯಾಸ್ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.