ADVERTISEMENT

ಕಾವೇರಿ ‘ತೀರ್ಥೋದ್ಭವ’ದ ಸಮಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 18:08 IST
Last Updated 16 ಅಕ್ಟೋಬರ್ 2019, 18:08 IST
ತಲಕಾವೇರಿ ಕ್ಷೇತ್ರದ ಬ್ರಹ್ಮಕುಂಡಿಕೆ
ತಲಕಾವೇರಿ ಕ್ಷೇತ್ರದ ಬ್ರಹ್ಮಕುಂಡಿಕೆ   

ಮಡಿಕೇರಿ: ಜೀವನದಿ ಕಾವೇರಿ ಉಗಮ ಸ್ಥಳವಾದ ತಲಕಾವೇರಿ ಕ್ಷೇತ್ರದಲ್ಲಿ ತೀರ್ಥೋದ್ಭವವು ಗುರುವಾರ ತಡರಾತ್ರಿ 12.59ಕ್ಕೆ ನೆರವೇರಲಿದೆ. ಈ ದೃಶ್ಯ ನೋಡಲು ಕಾವೇರಿ ನಾಡಿನತ್ತ ಭಕ್ತರು ಬರಲು ಆರಂಭಿಸಿದ್ದಾರೆ.

ಕರ್ಕಾಟಕ ಲಗ್ನದಲ್ಲಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ಕಾವೇರಿಯು ತೀರ್ಥ ರೂಪಿಣಿಯಾಗಿ ಭಕ್ತರಿಗೆಕಾಣಿಸಿಕೊಳ್ಳಲಿದ್ದಾಳೆ. ಭಾಗಮಂಡಲದ ಭಗಂಡೇಶ್ವರನ ದೇಗುಲದಲ್ಲಿ ಅಕ್ಷಯ ಪಾತ್ರೆಗೆ ಅಕ್ಕಿ ಹಾಕುವ ಮೂಲಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.

ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲದ ಭಗಂಡೇಶ್ವರನ ದೇವಾಲಯದಿಂದ ಬುಧವಾರ ತಲಕಾವೇರಿಗೆ ಕೊಂಡೊಯ್ಯಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.