ADVERTISEMENT

ಅಕ್ರಮ ಆಸ್ತಿ: ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 10:49 IST
Last Updated 21 ಅಕ್ಟೋಬರ್ 2024, 10:49 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ಪ್ರಜಾವಾಣಿ ಚಿತ್ರ

ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದೆ. 

ADVERTISEMENT

ಯತ್ನಾಳ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಶಿವಕುಮಾರ್ ಹಾಗೂ ಲೋಕಾಯುಕ್ತಕ್ಕೆ ನೋಟಿಸ್‌ ನೀಡಿತ್ತು.  

ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ‍ಪ್ರಕರಣವನ್ನು ಸಿಬಿಐ ತನಿಖೆಗೆ ಈ ಹಿಂದಿನ ಬಿಜೆಪಿ ಸರ್ಕಾರ 2019ರಲ್ಲಿ ನೀಡಿತ್ತು. ಈ ಅನುಮತಿಯನ್ನು ಕಾಂಗ್ರೆಸ್‌ ಸರ್ಕಾರ 2023ರ ನವೆಂಬರ್ 23ರಂದು ಹಿಂಪಡೆದಿತ್ತು. ನಂತರ ಲೋಕಾಯುಕ್ತ ತನಿಖೆಗೆ ವಹಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.