ADVERTISEMENT

ಇ.ಡಿ, ಸಿಬಿಐ ಯಾವುದೋ ಪಕ್ಷದ ಏಜೆಂಟ್‌ ಆಗಬಾರದು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 16:22 IST
Last Updated 17 ಅಕ್ಟೋಬರ್ 2024, 16:22 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ‘ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಆದರೆ ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯ ಹೆಸರು ಹೇಳಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಒತ್ತಡ ಹೇರಿದ್ದರು ಎಂದು ಬಿ.ನಾಗೇಂದ್ರ ಹೇಳಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ADVERTISEMENT

‘ನನ್ನ ಮತ್ತು ಶಿವಕುಮಾರ್ ಅವರ ಹೆಸರು ಹೇಳುವಂತೆ ಇ.ಡಿ ಅಧಿಕಾರಿಗಳು ಒತ್ತಾಯ ಮಾಡಿದರು ಎಂಬುದನ್ನು ನಾಗೇಂದ್ರ ನನಗೂ ಹೇಳಿದರು. ಅಂತಹ ಸಂಸ್ಥೆಗಳು ಯಾವುದೋ ಪಕ್ಷದ ಏಜೆಂಟಾಗಿ ಕೆಲಸ ಮಾಡಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.