ಸುಬ್ರಹ್ಮಣ್ಯ: ‘ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ರಕ್ಷಣೆಗೆ ಸರ್ಕಾರ ವಿಶೇಷ ಗಮನ ಹರಿಸಿದೆ. ಕೇರಳ ಗಡಿ ಭಾಗದ 23 ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಕ್ರಮಕೈಗೊಂಡಿದೆ’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜನಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
‘ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಜನರು ಸರ್ಕಾರದ ಜತೆ ಸಹಕರಿಸಬೇಕು’ ಎಂದರು.
‘ಪ್ರವೀಣ್ ಹತ್ಯೆ ಉದ್ದೇಶಪೂರ್ವಕ ಕೃತ್ಯ. ಪಿಎಫ್ಐ, ಎಸ್‌ಡಿಪಿಐ ಪಿತೂರಿಯಿಂದ ನಡೆದಿದೆ. ಪೊಲೀಸ್ ಇಲಾಖೆ ನಿರ್ಲಕ್ಷ್ಯ ಕುರಿತೂ ತನಿಖೆ ನಡೆಯಲಿದೆ. ತಪ್ಪಿತಸ್ಥರು ಯಾರೇ ಆಗಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.