ADVERTISEMENT

ಸೆಲೆಬ್ರಿಟಿಗಳ ಮಾದಕ ದ್ರವ್ಯ ಸೇವನೆ ದೃಢ; ಕರುಣೆ ತೋರದೆ ಕ್ರಮ- ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2021, 13:33 IST
Last Updated 24 ಆಗಸ್ಟ್ 2021, 13:33 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ   

ಬೆಂಗಳೂರು: ಸಿನಿಮಾ ನಟಿಯರು ಸೇರಿದಂತೆ ಹಲವು ಸೆಲೆಬ್ರಿಟಿಗಳು ಮಾದಕ ದ್ರವ್ಯ ಸೇವಿಸಿದನ್ನು ಹೈದರಾಬಾದ್‌ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ. ವರದಿಯನ್ನು ಶೀಘ್ರ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕ ದ್ರವ್ಯ ಸೇವಿಸಿದ ಆರೋಪಿಗಳ ತಲೆ ಕೂದಲು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಷ್ಟೆ ಒತ್ತಡ ಬಂದರೂ ಕರುಣೆ ತೋರದೆ ಕ್ರಮ ಜರುಗಿಸಲಾಗುವುದು. ಮಾದಕ ದ್ರವ್ಯ ಜಾಲದ ಮೇಲೆ ಪೊಲೀಸರು ನಿರಂತರ ದಾಳಿ ನಡೆಸುತ್ತಿದ್ದಾರೆ. ಸಾಗಣೆ, ವಿತರಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ದಂಧೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT