ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಆಗಿರುವ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರದ ಹಿರಿಯ ಅಧಿಕಾರಿಗಳ ಮೂರು ತಂಡಗಳು ಬರಲಿದ್ದು, ಸೆ.7 ರಿಂದ ಸೆ. 9 ರವರೆಗೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.
ಜುಲೈ ಮತ್ತು ಆಗಸ್ಟ್‌ನಲ್ಲಿ ಮಳೆ ಮತ್ತು ಪ್ರವಾಹದಿಂದ ಬೆಳೆ ನಷ್ಟ ಮತ್ತು ಮೂಲಸೌಕರ್ಯಗಳಿಗೆ ಆಗಿರುವ ಹಾನಿಯ ಬಗ್ಗೆ ಈ ತಂಡಗಳು ಅಧ್ಯಯನ ನಡೆಸಲಿವೆ ಎಂದು ಕಂದಾಯ ಸಚಿವ ಆರ್.ಅಶೋಕ ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ಅವರ ನೇತೃತ್ವದಲ್ಲಿ ಒಟ್ಟು ಮೂರು ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿವೆ. ಕೇಂದ್ರ ಜಲ ಆಯೋಗದ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಮತ್ತು ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಕೆ.ಮನೋಹರನ್ ಅವರು ಇನ್ನೆರಡು ತಂಡಗಳಲ್ಲಿ ಇರಲಿದ್ದಾರೆ.
ಆಶಿಶ್ ಕುಮಾರ್ ನೇತೃತ್ವದ ತಂಡ ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೂ, ಅಶೋಕ್ ಕುಮಾರ್ ತಂಡ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳು ಕೆ.ಮನೋಹರನ್ ಅವರ ತಂಡ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಲಿವೆ ಎಂದರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.